Latest

ವಂಚನೆ ಪ್ರಕರಣ; ನಿರ್ಮಾಪಕ ಕೆ.ಮಂಜು ವಿರುದ್ಧ ಎಫ್ಐಆರ್ ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಕೆ.ಮಂಜು ವಿರುದ್ಧ ಎಫ್ಐಆರ್ ದಾಖಲಾಗಿದೆ.

ಹೆಬ್ಬಟ್ ರಾಮಕ್ಕ ಚಿತ್ರ ನಿರ್ಮಾಪಕ ಎಸ್.ಎ.ಪುಟ್ಟರಾಜು ಎಂಬುವವರು ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆಯಲ್ಲಿ ನಿರ್ಮಾಪಕ ಕೆ.ಮಂಜು ಹಾಗೂ ರಾಜಗೋಪಾಲ್ ಎಂಬುವವರ ವಿರುದ್ಧ ದೂರು ದಾಖಲಿಸಿದ್ದಾರೆ.

Home add -Advt

2018ರಲ್ಲಿಯೇ ಕೆ.ಮಂಜು 1 ಕೋಟಿ 10 ಲಕ್ಷ ಹಾಗು ರಾಜಗೋಪಲ ಎಂಬುವವರು 68 ಲಕ್ಷ ಹಣ ಪಡೆದು ವಂಚಿಸಿದ್ದಾರೆ. ಹಣ ಕೇಳಿದರೆ ಜೀವಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿದ್ದಾರೆ. ಈ ಹಿನ್ನೆಯಲ್ಲಿ ಕೆ.ಮಂಜು ವಿರುದ್ಧ ಐಪಿಸಿ ಸೆಕ್ಷನ್ 420, 506 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button