Kannada NewsKarnataka NewsLatest

*ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆಯಲಿದ್ದು, ಇಂದಿನಿಂದ ಮತ್ತಷ್ಟು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಬೆಳಗಾವಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಆಗಸ್ಟ್ 19ರವರೆಗೂ ಮಳೆ ಮುಂದುವರೆಯಲಿದ್ದು, ಆ ಬಳಿಕ ಮಳೆ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ವಿಜಯನಗರ, ಮಂಡ್ಯ, ಮೈಸೂರು, ಕೋಲಾರ ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Related Articles

Back to top button