Latest

ಮೀನುಗಾರಿಕಾ ಬೋಟ್ ಅಪಘಾತ; 12 ಮೀನುಗಾರರು ನಾಪತ್ತೆ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಮೀನುಗಾರಿಕಾ ಬೋಟ್ ಹಾಗೂ ಹಡಗು ನಡುವೆ ಸಂಭವಿಸಿದ ಅಪಘಾತದಲ್ಲಿ 12 ಜನ ಮೀನುಗಾರರು ನಾಪತ್ತೆಯಾಗಿರುವ ಘಟನೆ ನವ ಮಂಗಳೂರು ಕರಾವಳಿ ಪ್ರದೇಶದಲ್ಲಿ ನಡೆದಿದೆ.

ಕೇರಳದ ಕೋಝಿಕ್ಕೋಡ್ ಜಿಲ್ಲೆಯಿಂದ ಮಂಗಳೂರಿನತ್ತ ಹೊರಟಿದ್ದ ಮೀನುಗಾರಿಕಾ ಬೋಟ್ ಗೆ ಹಡಗು ಡಿಕ್ಕಿಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಒಟ್ಟು 14 ಮೀನುಗಾರರು ನಾಪತ್ತೆಯಾಗಿದ್ದರು. ಅವರಲ್ಲಿ ಇಬ್ಬರು ಮೀನುಗಾರರನ್ನು ಪತ್ತೆ ಮಾಡಲಾಗಿದೆ ಎಂದು ಬಿಂಡಿಯನ್ ಕೋಸ್ಟ್ ಗಾರ್ಡ್ ತಿಳಿಸಿದೆ.

ಇನ್ನು ನಾಪತ್ತೆಯಾಗಿರುವ 12 ಮೀನುಗಾರರಿಗಾಗಿ ಶೋಧಕಾರ್ಯ ಮುಂದುವರೆದಿದೆ.
ವಿವಿಯ 20 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

Related Articles

Back to top button