Latest

ಎಸ್.ಎಸ್.ಎಲ್.ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಎಸ್.ಎಸ್.ಎಲ್.ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಗೊಂಡಿದೆ. ಜೂನ್ 21ರಿಂದ ಜುಲೈ 5ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ಒಂದು ತಿಂಗಳ ಹಿಂದೆ ಎಸ್.ಎಸ್.ಎಲ್.ಸಿ ವೇಳಾ ಪಟ್ಟಿ ಪ್ರಕಟಿಸಲಾಗಿತ್ತು. ವೇಳಾಪಟ್ಟಿಗೆ ಯಾರಿಂದಲೂ ಆಕ್ಷೇಪಣೆ ಬಂದಿಲ್ಲ. ಹೀಗಾಗಿ ಜೂನ್ 21 ರಿಂದ ಪರೀಕ್ಷೆ ನಡೆಸಲಾಗುವುದು. ಒಂದು ವಿಷಯಕ್ಕೆ ಒಂದು ದಿನ ವಿರಾಮ ಇರುವಂತೆ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ ಎಂದರು.

Home add -Advt

Related Articles

Back to top button