Kannada NewsKarnataka News

ಬೆಳಗಾವಿಯಲ್ಲಿ 11 ದಿನ ಗಣೇಶೋತ್ಸವಕ್ಕೆ ಸಿಎಂ ಒಪ್ಪಿಗೆ – ಅಭಯ ಪಾಟೀಲ

ಸೋಮವಾರ ಪಾಲಿಕೆ ಸದಸ್ಯರ ಸಿಎಂಭೇಟಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯಲ್ಲಿ 11 ದಿನಗಳ ಗಣೇಶೋತ್ಸವ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ಶಾಸಕ ಅಭಯ ಪಾಟೀಲ ತಿಳಿಸಿದ್ದಾರೆ.

Home add -Advt

ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅಭಯ ಪಾಟೀಲ ಈ ವಿಷಯ ತಿಳಿಸಿದ್ದಾರೆ.

ಗಣೇಶೋತ್ಸವ ಕುರಿತು ನಿರ್ಣಯ ತೆಗೆದುಕೊಳ್ಳುವ ಅಧಿಕಾರವನ್ನು ಆಯಾ ಜಿಲ್ಲಾಧಿಕಾರಿಗಳಿಗೆ ಬಿಡಲಾಗುವುದು ಎಂದೂ ಸಿಎಂ ತಿಳಿಸಿದ್ದಾರೆ. ಇಂದು ಮಧ್ಯಾಹ್ನದ ಹೊತ್ತಿಗೆ ಈ ಕುರಿತು ಆದೇಶ ಹೊರಬೀಳಲಿದೆ ಎಂದು ಅಭಯ ಪಾಟೀಲ ಹೇಳಿದ್ದಾರೆ.

ಸೋಮವಾರ ಪಾಲಿಕೆ ಸದಸ್ಯರ ಸಿಎಂಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೋಮವಾರ ಬೆಳಗಾವಿ ಪಾಲಿಕೆಯ ನೂತನ ಸದಸ್ಯರನ್ನು ಭೇಟಿ ಮಾಡಿಸಲಾಗುವುದು ಎಂದು ಅಭಯ ಪಾಟೀಲ ತಿಳಿಸಿದ್ದಾರೆ.

ವಿಧಾನಸಭೆ ಅಧಿವೇಶನ ಮುಗಿದ ನಂತರ ವಿಧಾನಸೌಧದಲ್ಲೇ ಸಿಎಂ ಭೇಟಿಗೆ ಸಮಯ ನಿಗದಿಪಡಿಸಲಾಗಿದೆ. ಅದಕ್ಕೂ ಮೊದಲು ಪಾಲಿಕೆಯ ಎಲ್ಲ ಸದಸ್ಯರನ್ನು ಬಿಜೆಪಿ ಕಚೇರಿಗೆ ಕರೆದೊಯ್ಯಲಾಗುವುದು ಎಂದಿದ್ದಾರೆ.

2 -3 ದಿನದಲ್ಲಿ ಮುಖ್ಯಮಂತ್ರಿ ಬಳಿ ಪಾಲಿಕೆ ಸದಸ್ಯರ ಪರೇಡ್ – ಅಭಯ ಪಾಟೀಲ

Related Articles

Back to top button