Kannada NewsKarnataka NewsLatest
40 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಗಣೇಶಪುರ ಪ್ರದೇಶದಲ್ಲಿ ಸಿ ಸಿ ರಸ್ತೆಯ ನಿರ್ಮಾಣದ ಕಾಮಗಾರಿಗಳಿಗೆ ಮಂಗಳವಾರ ಚಾಲನೆ ನೀಡಲಾಯಿತು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೃಣಾಲ್ ಹೆಬ್ಬಾಳಕರ್ ಮೊದಲಾದವರು ಅಧಿಕೃತವಾಗಿ ಚಾಲನೆಯನ್ನು ನೀಡಿದರು.ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ನಾಗರಿಕರು ಉಪಸ್ಥಿತರಿದ್ದರು.




