Latest

ಹೈರಿಸ್ಕ್ ದೇಶದಿಂದ ಬಂದ ಮತ್ತಿಬ್ಬರಿಗೆ ಕೊರೊನಾ ದೃಢ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಒಮಿಕ್ರಾನ್ ಸೋಂಕು ಪತ್ತೆಯಾಗುತ್ತಿರುವ ಹೈರಿಸ್ಕ್ ದೇಶಗಳಿಂದ ಬೆಂಗಳೂರಿಗೆ ಆಗಮಿಸಿದ್ದ ಮತ್ತೆ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಂತರಾಷ್ಟ್ರೀಯ ಪ್ರಯಾಣಿಕರನ್ನು ಆರ್ ಟಿಪಿಸಿ ಆರ್ ಟೆಸ್ಟ್ ಗೆ ಒಳಪಡಿಸಿದಾಗ ಕೊರೊನಾ ಸೋಂಕು ದೃಢಪಟ್ಟಿದೆ. 9 ವರ್ಷದ ಬಾಲಕಿ ಹಾಗೂ 20 ವರ್ಷದ ಯುವಕನಲ್ಲಿ ಸೋಂಕು ಪತ್ತೆಯಾಗಿದೆ.

ವೈದ್ಯಾಧಿಕಾರಿಗಳು ಇಬ್ಬರ ಪ್ರಯಾಣಿಕರ ಸ್ಯಾಂಪಲ್ ಪಡೆದು ಜಿನೋಟಿಕ್ ಸೀಕ್ವೆನ್ಸ್ ಗೆ ಕಳುಹಿಸಿದ್ದಾರೆ. ಒಮಿಕ್ರಾನ್ ಭೀತಿ ಬೆನ್ನಲ್ಲೇ ಬೆಂಗಳೂರಿಗೆ ಆಗಮಿಸಿದ ಇಬ್ಬರು ಪ್ರಯಾಣಿಕರಲ್ಲಿ ಕೊರೊನಾ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನೂರ್ ಜಹಾನ್ ಬಂಧನ

Related Articles

Back to top button