Latest

3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಭಾರಿ ವಿವಾದಕ್ಕೆ ಕಾರಣವಾಗಿದ್ದ ಕೇಂದ್ರ ಸರ್ಕಾರದ 3 ಕೃಷಿ ತಿದ್ದುಪಡಿ ಕಾಯ್ದೆಯನ್ನು ವಾಪಸ್ ಪಡೆಯಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ನೂತನ ಕೃಷಿ ಕಾಯ್ದೆ ವಿರುದ್ಧ ದೇಶಾದ್ಯಂತ ರೈತರು ಹೋರಾಟ ನಡೆಸಿದ್ದರು. ಕೊನೆಗೂ ಅನ್ನದಾತನ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿದಿದ್ದು, 3 ಕೃಷಿ ಕಾಯ್ದೆ ವಾಪಸ್ ಪಡೆಯುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಇದೇ ವೇಳೆ ರೈತರು ತಮ್ಮ ಹೋರಾಟವನ್ನು ಕೈಬಿಡುವಂತೆ ಮನವಿ ಮಾಡಿದ್ದಾರೆ. ಕೃಷಿ ಕಾಯ್ದೆ ವಿರೋಧಿಸಿ ಕಳೆದ ಒಂದು ವರ್ಷದಿಂದ ರೈತರು ಪ್ರತಿಭಟನೆ ನಡೆಸಿದ್ದರು.

Related Articles

Back to top button