EducationKannada NewsKarnataka News

*ಭಾರಿ ಮಳೆ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ತನ್ನ ಆರ್ಭಟ ಮುಂದುವರಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ಉಡುಪಿ 3 ಹಾಗೂ ಉತ್ತರ ಕನ್ನಡ ಜಿಲ್ಲೆಯ 1 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆಯಾ ಜಿಲ್ಲಾಡಳಿತಗಳು ಆದೇಶಿಸಿವೆ.

ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲೂಕುಗಳ ಶಾಲಾ- ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಕುಂದಾಪುರ ಉಪ-ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಆದೇಶ ಹೊರಡಿಸಿದ್ದಾರೆ.

ಅದೇ ರೀತಿ, ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಶಾಲೆಗಳಿಗೂ ಇಂದು ರಜೆ ಘೋಷಿಸಿ ಉತ್ತರ ಕನ್ನಡ DC ಗಂಗೂಬಾಯಿ ಮಾನಕರ ಆದೇಶವನ್ನು ಹೊರಡಿಸಿದ್ದಾರೆ ಎಂದು ವರದಿಯಾಗಿದೆ. 

ಅಗತ್ಯಬಿದ್ದರೆ, ಹೊನ್ನಾವರ ತಾಲೂಕಿನ ಶಾಲೆಗಳಿಗೂ ರಜೆ ನೀಡಲು ಸೂಚನೆ ನೀಡಲಾಗಿದೆ. ನಾಳೆ ಭಾರೀ ವರ್ಷಧಾರೆಯಿಂದ ಇನ್ನಷ್ಟು ಅವಾಂತರ ಆಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

Related Articles

Back to top button