Kannada NewsLatestNational

*ಕಳಶ ಯಾತ್ರೆಯ ವೇಳೆ ಭೀಕರ ಕಾಲ್ತುಳಿತ*

ಪ್ರಗತಿವಾಹಿನಿ ಸುದ್ದಿ: ಕಳಶ ಯಾತ್ರೆಯ ವೇಳೆ ಭೀಕರ ಕಾಲ್ತುಳಿತ ಸಂಭವಿಸಿದ್ದು, ಓರ್ವ ಭಕ್ತ ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯಾರ್‌ನಲ್ಲಿ ನಡೆದಿದೆ.‌

ಗ್ವಾಲಿಯಾರ್‌ನಲ್ಲಿ ಆಯೋಜಿಸಲಾಗಿದ್ದ ಈ ಕಳಶ ಯಾತ್ರೆಯಲ್ಲಿ ಅಪಾರ ಸಂಖ್ಯೆಯ ಭಕ್ತರು ಸೇರಿದ್ದರು. ಭಾರಿ ಜನಸಂದಣಿಯ ನೂಕುನುಗ್ಗಲಿನಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ದುರಂತಕ್ಕೆ ಕಾರಣವಾಗಿದೆ.

ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button