Kannada NewsKarnataka NewsLatestPolitics

*ರಾಕ್ ಲೈನ್ ಮಾಲ್ ಗೆ ಬೀಗ ಜಡಿದ ಬಿಬಿಎಂಪಿ ಅಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಒಡೆತನದ ರಾಕ್ ಲೈನ್ ಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿದಿರುವ ಘಟನೆ ನಡೆದಿದೆ.

ರಾಕ್ ಲೈನ್ ವೆಂಕಟೇಶ್ ಅವರ ಟಿ.ದಾಸರಹಳ್ಳಿಯಲ್ಲಿನ ಪ್ರಶಾಂತ್ ನಗರದಲ್ಲಿರುವ ರಾಕ್ ಲೈನ್ ಮಾಲ್ ಗೆ ಬಿಬಿಎಂಪಿ ಕಂದಾಯ ಅಧಿಕಾರಿಗಳು ಬೀಗ ಹಾಕಿದ್ದಾರೆ.

ರಾಕ್ ಲೈನ್ ಮಾಲ್ ನಿಂದ 2011ರಿಂದ 2023ವರೆಗೆ ಒಟ್ಟು 11.51 ಕೋಟಿ ತೆರಿಗೆ ಬಾಕಿ ಉಳಿಸಿಕೊಳ್ಳಲಾಗಿದೆ. ಹಲವು ಬಾರಿ ನೋಟಿಸ್ ನೀಡಿದರೂ ತೆರಿಗೆ ಪಾವತಿ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಕಂದಾಯ ಅಧಿಕಾರಿಗಳು ಮಾಲ್ ಗೆ ಬೀಗಮುದ್ರೆ ಹಾಕಿದ್ದಾರೆ.


Related Articles

Back to top button