*BREAKING: ಶಾಸಕ ಸುಬ್ಬರೆಡ್ಡಿಗೆ ತಾತ್ಕಾಲಿಕ ರಿಲೀಫ್: ಶಾಸಕ ಸ್ಥಾನಕ್ಕೆ ಮತ್ತೆ ಜೀವ ನೀಡಿದ ಸುಪ್ರೀಂ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬರೆಡ್ಡಿಗೆ ಸುಪ್ರೀಂ ಕೋರ್ಟ್ ತಾತ್ಕಲೈಕವಾಗಿ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಈ ಮೂಲಕ ಸುಬ್ಬಾರೆಡ್ಡಿಯ ಶಾಸಕ ಸ್ಥಾನಕ್ಕೆ ಮತ್ತೆ ಮರುಜೀವ ಬಂದಂತಾಗಿದ್ದು, ಮುಂದಿನ ವಿಚಾರಣೆವರೆಗೂ ಅವರು ಶಾಸಕರಾಗಿ ಮುಂದುವರೆಯಲಿದ್ದಾರೆ. ಸುಬ್ಬಾರೆಡ್ಡಿ ಅವರು ಬಹುಮತದ ಮೂಲಕ ಶಾಸಕರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಏಕಾಏಕಿ ಅವರ ಶಾಸಕತ್ವವನ್ನು ಅಸಿಂಧುಗೊಳಿಸುವುದು ಸರಿಯಲ್ಲ. ಕೇವಲ ಅವರ ಆದಾಯವನ್ನು ಬಹಿರಂಗಪಡಿಸಿದರೆ ಸಾಕೇ? ಅಥವಾ ವ್ಯವಹಾರಗಳನ್ನು ಕೂಡ ಬಹಿರಮ್ಗಪಡಿಸಬೇಕೇ? ಎಂಬ ಬಗ್ಗೆ ವಿಚಾರಣೆ ನಡೆಯಬೇಕು. ಹಾಗಾಗಿ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ ಗೆ ಮುಂದೂಡಿ ಸುಪ್ರೀ ಕೋರ್ಟ್ ಆದೇಶ ಹೊರಡಿಸಿದೆ.
ಅಲ್ಲದೇ 6 ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸಿ.ಮುನಿರಾಜು ಅವರಿಗೆ ಸೂಚನೆ ನೀಡಿದೆ. ಹಾಗಾಗಿ ಸುಬ್ಬಾರೆಡ್ಡಿ ಶಾಸಕ ಸ್ಥಾನಕ್ಕೆ ಸದ್ಯ ರಿಲೀಫ್ ಸಿಕ್ಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



