Latest

ನೀರಿನಲ್ಲಿ ಮಗು ಮುಳುಗಿಸಿ, ಆತ್ಮಹತ್ಯೆಗೆ ಶರಣಾದ ತಾಯಿ

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಮಹಿಳೆಯೊಬ್ಬಳು ತನ್ನ ಐದು ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ತಾನೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ ಮಾನ್ವಿ ಪಟ್ಟಣದಲ್ಲಿ ನಡೆದಿದೆ.

ಜಾನಕಿ (27) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಮಾನ್ವಿ ಪಟ್ಟಣದ ಕೋನಾಪೂರ ಪೇಟೆಯ 7ನೇ ವಾರ್ಡಿನಲ್ಲಿ ಈ ಘಟನೆ ನಡೆದಿದೆ. ಮೊದಲಿಗೆ ತನ್ನ ಐದು ತಿಂಗಳ ಮಗು ರಾಘವೇಂದ್ರನನ್ನ ನೀರಿನಲ್ಲಿ ಮುಳುಗಿಸಿ ಸಾಯಿಸಿದ್ದಾಳೆ. ನಂತರ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮೃತ ಮಹಿಳೆಯ ಪತಿ ಹುಲಿಗೆಪ್ಪ ಮೊಬೈಲ್ ಸ್ವಿಚ್ ಆಫ್ ಮಾಡಿದ್ದು, ಪತಿ ನಾಪತ್ತೆ ಆಗಿರುವುದರಿಂದ ಮಹಿಳೆ ಹಾಗೂ ಮಗುವಿನ ಸಾವಿನ ಬಗ್ಗೆ ಹಲವು ಅನುಮಾನಗಳನ್ನು ಮೂಡಿಸಿದೆ.

ಮಾನ್ವಿ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮಾನ್ವಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಮಹಿಳೆಯ ಪತಿ ಹಾಗೂ ಸಂಬಂಧಿಕರು ಬಂದ ಬಳಿಕ ವಿಚಾರಣೆ ಮುಂದುವರಿಸುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Related Articles

Back to top button