Latest

ರಾಜ್ಯದ 17 ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ಕರ್ನಾಟಕದ 17 ಜಿಲ್ಲೆಗಳಲ್ಲಿ 3 ದಿನ ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆ ಈ ಮುನ್ಸೂಚನೆ ನೀಡಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

 

Related Articles

Back to top button