Kannada NewsKarnataka NewsPolitics

*17 ರಂದು ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದ ವಿಜಯೇಂದ್ರ*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿಗೆ ಪಾದಯಾತ್ರೆ ಇಲ್ಲ, ಬೃಹತ್ ಹೋರಾಟ ಮಾತ್ರ’ ಮಾಡುತ್ತೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಘೋಷಣೆ ಮಾಡಿದರು.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಜ.17ರಂದು ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. ಕಾನೂನು ಸುವ್ಯವಸ್ಥೆ ವಿಚಾರ ಇಟ್ಟುಕೊಂಡು ಹೋರಾಟ ಮಾಡುತ್ತೇವೆ. ಪಾದಯಾತ್ರೆ ನಿರ್ಧಾರವನ್ನು ಹೈಕಮಾಂಡ್ ಗೆ ಬಿಟ್ಟಿದ್ದೇವೆ. ಹೈಕಮಾಂಡ್ ಒಪ್ಪಿಗೆ ಕೊಟ್ಟರೆ ಮಾತ್ರ ಪಾದಯಾತ್ರೆ ನಡೆಸುತ್ತೇವೆ ಎಂದು ವಿಜಯೇಂದ್ರ ಹೇಳಿದರು.

Related Articles

Back to top button