
ಪ್ರಗತಿವಾಹಿನಿ ಸುದ್ದಿ; ಕೋಲಾರ: ಕೃಷಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಬೆಂಬಲವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಅವರು, ಭೂ ಸುಧಾರಣಾ ತಿದ್ದುಪಡಿ ವಿಧೇಯಕಕ್ಕೆ ನಾವು ಬೆಂಬಲ ನೀಡಿದ್ದೇವೆ. ಕಾಯ್ದೆಯಲ್ಲಿರುವ ಮಾರಕ ಅಂಶಗಳ ಬಗ್ಗೆ ನಾವು ಸರ್ಕಾರದ ಗಮನ ಸೆಳೆದ ಬಳಿಕ ಸಿಎಂ ಯಡಿಯೂರಪ್ಪ ಕೆಲ್ಲ ತಿದ್ದುಪಡಿ ಅಂಶ ಕೈಬಿಟ್ಟರು. ಹೀಗಾಗಿ ವಿಧೇಯಕಕ್ಕೆ ಬೆಂಬಲ ನೀಡಿದ್ದೇವೆ ಎಂದರು.
ರೈತ ಮುಖಂಡರು ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಬಗ್ಗೆ ಮೊದಲು ತಿಳಿದುಕೊಳ್ಳಬೇಕು. ಈಗ ರೈತರು ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಬೆಂಬಲವಿಲ್ಲ. ವೈಯಕ್ತಿಕ ಲಾಭಕ್ಕಾಗಿ ನಾನು ಪ್ರತಿಭಟನೆಗಳನ್ನು ಬೆಂಬಲಿಸಲ್ಲ ಎಂದು ಹೇಳಿದರು.