
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ತನಿಖೆ ಮುಕ್ತಾಯವಾಗಿದ್ದು, ಅಂತಿಮ ವರದಿ ಸಿದ್ಧವಿದೆ ಎಂದು ಎಸ್ ಐಟಿ ಹೈಕೋರ್ಟ್ ಗೆ ತಿಳಿಸಿದೆ.
ಸಿಡಿ ಕೇಸ್ ಗೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳ ವಿಚಾರಣೆ ನಡೆಸಿ, ತನಿಖೆ ಪೂರ್ಣಗೊಳಿಸಲಾಗಿದೆ. ತನಿಖಾ ವರದಿ ಕೂಡ ಸಿದ್ಧವಿದೆ ಎಂದು ಎಜಿ ಪ್ರಭುಲಿಂಗ ಹೈಕೋರ್ಟ್ ಗೆ ಮೆಮೋ ಸಲ್ಲಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ನ್ಯಾಯಾಲಯ ಜುಲೈ 14ರೊಳಗೆ ತನಿಖಾ ವರದಿಯ ಇಂಗ್ಲೀಷ್ ಅನುವಾದವನ್ನು ಸಲ್ಲಿಸಿ ಎಂದು ಸೂಚಿಸಿದೆ. ಅಲ್ಲದೇ ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿದೆ.
ಸಿಎಂ ಬಿಎಸ್ ವೈ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಸಿದ್ದರಾಮಯ್ಯ