National

*ಕಂಟೈನರ್ ಹಡಗಿನಲ್ಲಿ ಭಾರಿ ಸ್ಪೋಟ: 18 ಸಿಬ್ಬಂದಿಯ ರಕ್ಷಣೆ*

ಪ್ರಗತಿವಾಹಿನಿ ಸುದ್ದಿ: ಸಿಂಗಾಪುರ ಧ್ವಜ ಹೊಂದಿರುವ ಕಂಟೈನರ್ ಹಡಗು ಎಂವಿ ವಾನ್ ಹೈ 503ರಲ್ಲಿ ಸ್ಫೋಟ ಸಂಭವಿಸಿರುವ ಘಟನೆ ಕೇರಳದ ಕರಾವಳಿಯಲ್ಲಿ ಸಂಭವಿಸಿದೆ.

ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಕಂಟೈನರ್ ಹಡಗಿನಿಂದ 18 ಸಿಬ್ಬಂದಿಯನ್ನು ಭಾರತೀಯ ನೌಕಪಡೆ ಹಾಗೂ ಕರಾವಳಿ ರಕ್ಷಣಾ ಪಡೆ ರಕ್ಷಿಸಿರುವುದಾಗಿ ರಕ್ಷಣಾ ಮೂಲಗಳು ತಿಳಿಸಿವೆ.

270 ಮೀಟರ್ ಉದ್ದದ ಹಡಗು ಜೂನ್ 7 ರಂದು ಕೊಲಂಬೊದಿಂದ ಹೊರಟು ಮುಂಬೈಗೆ ತೆರಳುತ್ತಿತ್ತು, ಜೂನ್ 10 ರಂದು ಆಗಮಿಸುವ ನಿರೀಕ್ಷೆಯಿತ್ತು.

ಸಮುದ್ರ ಮಧ್ಯದಲ್ಲಿ ಎಂವಿ ವಾನ್ ಹೈ 503 ಹಡಗಿನಲ್ಲಿ ಸ್ಫೋಟ ಸಂಭವಿಸಿರುವ ಬಗ್ಗೆ ಮುಂಬೈ ಕಡಲ ಕಾರ್ಯಾಚಾರಣೆ ಕೇಂದ್ರದಿಂದ ಮಾಹಿತಿ ಪಡೆಯಲಾಯಿತು.

ಕೂಡಲೇ ಕಾರ್ಯಪ್ರವೃತ್ತರಾದ ಭಾರತೀಯ ನೌಕ ಪಡೆ ಕೊಚ್ಚಿಯಲ್ಲಿ ನಿಲ್ಲಿಸಲು ನಿರ್ಧರಿಸಿದ್ದ ಐಎನ್‌ಎಸ್‌ ಸೂರತ್ ನ್ನು ನೆರವಿಗೆ ಕಳುಹಿಸಿದ್ದಾರೆ ಎಂದು ರಕ್ಷಣಾ ಪಡೆ ಪಿಆರ್ ಓ  ತಿಳಿಸಿದ್ದಾರೆ ಎನ್ನಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button