Latest

130 ಕೋಟಿ ರೂ ಬೆಳೆ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಜನರು ಸಂಕಷ್ಟಕ್ಕೀಡಾಗಿದ್ದಾರೆ. ಶೀಘ್ರದಲ್ಲಿ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಬೆಳೆ ನಷ್ಟದ ಕುರಿತು ಈಗಾಗಲೇ ಎಲ್ಲ ಕಡೆ ಪ್ರಾಥಮಿಕ ಸಮೀಕ್ಷೆ ಆರಂಭವಾಗಿದೆ. ಬೆಳೆ ಹಾನಿ, ಮಳೆ ಹಾನಿ ಬಗ್ಗೆ ವರದಿ ನೀಡಲು ಸೂಚಿಸಿದ್ದೇನೆ. ಸಂಜೆ ವೇಳೆಗೆ ವರದಿ ತರಿಸಿಕೊಂಡು ಅಧಿಕಾರಿಗಳ ಜೊತೆ ಬೆಳೆ ಪರಿಹಾರ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದರು.

Home add -Advt

ಜುಲೈ ಹಾಗೂ ಆಗಸ್ಟ್ ತಿಂಗಳಿನಲ್ಲಿ 3 ಲಕ್ಷ ರೈತರ ಬೆಳೆ ನಷ್ಟವಾಗಿತ್ತು. ಈ ನಿಟ್ಟಿನಲ್ಲಿ 130 ಕೋಟಿ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಈ ಹಿಂದೆ ಸೂಚಿಸಿದ್ದೇನೆ. ಪ್ರಸ್ತುತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪರಿಹಾರ ವಿಚಾರವಾಗಿ ಚುನಾವಣಾ ಆಯೋಗದ ಅನುಮತಿ ಪಡೆದುಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

Related Articles

Back to top button