Latest

ಕನ್ನಡ ರಾಜ್ಯೋತ್ಸವ, ದೀಪಾವಳಿಗೆ ಹೊಸ ಗೈಡ್ ಲೈನ್ ಪ್ರಕಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ 500 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ದೈಹಿಕ ಅಂತರವಿಲ್ಲದ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗಿದೆ.

Home add -Advt

ರಾಜ್ಯೋತ್ಸವ ಕಾರ್ಯಕ್ರಮದ ವೇಳೆ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಇದೇ ವೇಳೆ ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಹೊಸ ಗೈಡ್ ಲೈನ್ ಪ್ರಕಟ ಮಾಡಲಾಗಿದ್ದು, ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗಿದೆ.

ನವೆಂಬರ್ 1ರಿಂದ 10ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ನೀಡಲಾಗಿದ್ದು, ಅಧಿಕೃತ ಪರವಾನಗಿ ಪಡೆದವರಿಗೆ ಮಾತ್ರ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶವಿದೆ ಎಂದು ರಾಜ್ಯ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಪುನೀತ್ ಅಂತ್ಯಕ್ರಿಯೆ ನಾಳೆ ನಡೆಸಲು ನಿರ್ಧಾರ; ಸಿಎಂ ಬೊಮ್ಮಾಯಿ

Related Articles

Back to top button