Latest

ವೈದ್ಯರು, ಆರೋಗ್ಯ ಸಿಬ್ಬಂದಿಯಲ್ಲಿ ದೇವರನ್ನು ಕಂಡೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ತಮ್ಮ ಪ್ರಾಣ ಪಣಕ್ಕಿಟ್ಟು ನಮ್ಮ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಯಲ್ಲಿ ದೇವರನ್ನು ಕಂಡೆ ಎಂದು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಟೀಲ್, ಕಟೀಲು ದುರ್ಗಾಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಯ ಫಲವಾಗಿ ಕೊರೊನಾ ಕಾಯಿಲೆಯಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲವು ದಿನಗಳ ತನಕ ಕ್ವಾರಂಟೈನ್‍ನಲ್ಲಿ ಇರಲು ವೈದ್ಯರು ಸಲಹೆ ನೀಡಿದ್ದಾರೆ” ಎಂದು ನಳಿನ್ ಕುಮಾರ್ ತಿಳಿಸಿದ್ದಾರೆ.

ಮೊತ್ತೊಂದು ಟ್ವೀಟ್ ಮಾಡಿದ್ದು, “ನಾನು ಭಗವಂತನನ್ನು ಕಣ್ಣಾರೆ ನೋಡಿದವನಲ್ಲ. ಆದರೆ ತಮ್ಮ ಅಮೂಲ್ಯ ಪ್ರಾಣವನ್ನು ಪಣಕ್ಕಿಟ್ಟು ನಮ್ಮ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಯಲ್ಲಿ ದೇವರನ್ನು ಕಂಡೆ” ಎಂದು ವೈದ್ಯರು, ದಾದಿಯರಿಗೆ ಧನ್ಯವಾದ ತಿಳಿಸಿದ್ದಾರೆ.

ಕಟೀಲ್ ಅವರಿಗೆ ಆಗಸ್ಟ್ 30 ರಂದು ಕೊರೊನಾ ಪಾಸಿಟಿವ್ ದೃಢವಾಗಿತ್ತು. ತಕ್ಷಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಕೊರೊನಾದಿಂದ ಗುಣಮುಖರಾಗಿದ್ದಾರೆ.

Home add -Advt

Related Articles

Back to top button