Karnataka NewsLatest

*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಹಲವೆಡೆ ಗುಡುಗು, ಮಿಂಚು ಸಹಿತ ವರುಣಾರ್ಭಟ

Home add -Advt

ಪ್ರಗತಿವಾಹಿನಿ ಸುದ್ದಿ; ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ದಕ್ಷಿಣ ಒಳನಾಡು, ಉತ್ತರ ಒಳನಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಕ್ಟೋಬರ್ 8ರವರೆಗೂ ಮಳೆಯಾಗಲಿದೆ ಎಂದು ತಿಳಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ. ವಿಜಯಪುರ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಭಾರಿ ಮಳೆಯಾಗಲಿದೆ.

ಶಿವಮೊಗ್ಗದಲ್ಲಿ ಚದುರಿದ ಮಳೆ, ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Related Articles

Back to top button