Belagavi NewsBelgaum NewsKannada NewsKarnataka NewsLatest

*ಬೆಳಗಾವಿ ಚೆಕ್ ಪೋಸ್ಟ್ ನಲ್ಲಿ ಲಕ್ಷ ಲಕ್ಷ ಹಣ ಸೀಜ್*

ಪ್ರಗತಿವಾಹಿನಿ ಸುದ್ದಿ: ಸೋಮವಾರ ಸಾಯಂಕಾಲ ಚಿಕ್ಕೋಡಿ ಚೆಕ್ ಪೋಸ್ಟ್ ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಅವರು ಕರ್ತವ್ಯಲೋಪ ಆಗದಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಎಚ್ಚರಿಕೆ ನೀಡಿದ್ದರು, ಅದರಿಂದ ಫುಲ್ ಅಲರ್ಟ್ ಆಗಿರುವ ಚುನಾವಣಾ ಅಧಿಕಾರಿಗಳು ಲಕ್ಷ ಲಕ್ಷ ಹಣ ಸೀಜ್ ಮಾಡಿದ್ದಾರೆ.‌

Home add -Advt

ಬೆಳಗಾವಿ ಗಡಿಗೆ ಹೊಂದಿಕೊಂಡು ಇರುವ ಬಾಚಿ ಚೆಕ್ ಪೋಸ್ಟ್ ನಲ್ಲಿ ಚುನಾವಾಣಾಧಿಕಾರಿ ಪ್ರಶಾಂತ್ ದೀಕ್ಷಿತ ಅವರ ತಂಡ 6.65 ಲಕ್ಷ ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.‌

ಅಮೂಲ ವಿದ್ಯಾಧರ ಎಂಬ ವ್ಯಕ್ತಿ ಮಧ್ಯರಾತ್ರಿ 12 ಗಂಟೆ ಸುಮಾರಿಗೆ 6.65 ಲಕ್ಷ ಹಣ ದಾಖಲೆ ಇಲ್ಲದೆ ಸಾಗಿಸುತ್ತಿದ್ದರು, ಬಾಚಿ ಚೆಕ್ ಪೋಸ್ಟ್ ಬಳಿ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಹಣ ಪತ್ತೆ ಆಗಿದೆ ಎಂದು ತಿಳಿದು ಬಂದಿದೆ.‌

Related Articles

Back to top button