Kannada NewsKarnataka News

*ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರಕಾರ ನೌಕರರ ತುಟ್ಟಿಭತ್ಯೆ ಶೇ.1.50ರಷ್ಟು ಹೆಚ್ಚಿಸಿದೆ. ಈ ಮೂಲಕ ತುಟ್ಟಿಭತ್ಯೆ ಶೇ.10.75ರಿಂದ 12.25ಕ್ಕೆ ಏರಿಕೆಯಾಗಿದೆ. ದಿನಾಂಕ 1.1.2025ರಿಂದ ಅನ್ವಯವಾಗುವಂತೆ ಜಾರಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸರ್ಕಾರದ ಆರ್ಥಿಕ ಇಲಾಖೆ ಉನ್ನತ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button