Kannada NewsKarnataka NewsLatestPolitics

*ಹಾಲಿ ಸಂಸದ ಡಿ.ವಿ.ಸದಾನಂದಗೌಡಗೆ ಬಿಜೆಪಿ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಇದೇ ವೇಳೆ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆ ನಿಟ್ಟಿನಲ್ಲಿ ಖುದ್ದು ಹೈಕಮಾಂಡ್ ನಿರ್ಧಾರಗಳನ್ನು ಕೈಗೊಂಡಿದೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ, ಮಾಜಿ ಸಿಎಂ ಡಿ.ವಿ ಸದಾನಂದಗೌಡಗೆ ಬಿಗ್ ಶಾಕ್ ನೀಡಿರುವ ಬಿಜೆಪಿ ಹೈಕಮಾಂಡ್ ಈ ಬಾರಿ ಲೋಕಸಭಾ ಟಿಕೆಟ್ ಬೇರೆ ಅಭ್ಯರ್ಥಿಗಳಿಗೆ ನೀಡುವುದಾಗಿ ಸಂದೇಶ ರವಾನಿಸಿದೆ.

ಬಿಜೆಪಿ ಹೈಕಮಾಂಡ್ ಖುದ್ದು ದೂರವಾಣಿ ಕರೆ ಮಾಡಿ ಹಾಲಿ ಸಂಸದ ಡಿ.ವಿ.ಸದಾನಂದಗೌಡಗೆ ಮಾಹಿತಿ ನೀಡಿದ್ದು, ಈ ಬಾರಿ ಟಿಕೆಟ್ ಮಿಸ್ ಆಗಿರುವುದಾಗಿ ತಿಳಿಸಿದೆ. ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಬದಲಾವಣೆ ಮಾಡುತ್ತಿರುವುದಾಗಿ ಸಂದೇಶ ರವಾನಿಸಿದೆ.


Home add -Advt

Related Articles

Back to top button