
ಪ್ರಗತಿವಾಹಿನಿ ಸುದ್ದಿ: ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಅಭಾವವಾಗದಂತೆ ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಸಿಇಒ ರಾಹುಲ್ ಶಿಂಧೆ ಅವರು ಅಧಿಕಾರಿಗಳಿಗೆ ತಿಳಿಸಿದರು.
ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದ ಬಹು ಗ್ರಾಮ ಕುಡಿಯುವ ನೀರಿನ ಘಟಕಕ್ಕೆ (ದಿ.11) ಮಂಗಳವಾರ ಭೇಟಿ ನೀಡಿ ಅವರು ಮಾತನಾಡಿದರು.
ಪ್ರತಿ 15 ದಿನಗಳಿಗೊಮ್ಮೆ ನೀರಿನ ಟ್ಯಾಂಕರ್ ಗಳನ್ನು ಶುಚಿಗೊಳಿಸಬೇಕು. ಈ ಭಾಗದಲ್ಲಿ ಬೇಸಿಗೆ ಸಮಯದಲ್ಲಿ ನೀರಿನ ಅಭಾವ ಹೆಚ್ಚಾಗುತ್ತದೆ. ಜನ ಜಾನವಾರುಗಳಿಗೆ ನೀರಿನ ಕೊರತೆಯಾಗದಂತೆ ನೋಡಿಕೊಳ್ಳುವಂತೆ ತಿಳಿಸಿದರು. ಇದೇ ವೇಳೆ ದಾಖಲಾತಿಗಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿಗಳಾದ ಬಸವರಾಜ ಅಡವಿಮಠ, ಕಾಗವಾಡ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಾದ ವೀರಣ್ಣ ವಾಲಿ , ಅಥಣಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿವಾನಂದ ಕಲ್ಲಾಪೂರ, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾದ ರವೀಂದ್ರ ಮುರಗಾಲಿ ಸೇರಿದಂತೆ ಮುಂತಾದವರು ಇದ್ದರು.