Latest

ಮಗುವನ್ನು ಆಸ್ಪತ್ರೆಗೆ ಕರೆದೊಯ್ದ ಮಹಿಳೆಗೆ ವೈದ್ಯನಿಂದ ಕಿರುಕುಳ

ಪ್ರಗತಿವಾಹಿನಿ ಸುದ್ದಿ; ಪಾಟ್ನಾ: ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿಗೆ ಚಿಕಿತ್ಸೆ ಕೊಡಿಸಲೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ ಮಹಿಳೆಗೆ ವೈದ್ಯನೇ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ನಡೆದಿದೆ.

ಸಂತ್ರಸ್ತ ಮಹಿಳೆ ಮನೆಗೆ ಬಂದು ವಿಷಯ ತಿಳಿಸಿದ್ದಾರೆ. ಬಳಿಕ ಮನೆಯವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ದೂರು ಸ್ವೀಕರಿಸಿದ ಪೊಲೀಸರು ವೈದ್ಯರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆ ಕುಟುಂಬಸ್ಥರು ಆರೋಪಿಸಿದ್ದಾರೆ.

ಪೊಲೀಸರ ಕ್ರಮವನ್ನು ಖಂಡಿಸಿರುವ ಗ್ರಾಮಸ್ತರು ಸಮಸ್ತಿಪುರ-ಪಾಟ್ನಾ ಮುಖ್ಯರಸ್ತೆಯನ್ನು ಬಂದ್ ಮಾಡಿ, ಅಂಗಡಿ ಮುಂಗಟ್ಟುಗಳನ್ನು ಧ್ವಂಸ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈ ಎಸ್ ಪಿ ಭೇಟಿ ನೀಡಿ, ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Home add -Advt

Related Articles

Back to top button