Kannada NewsKarnataka NewsLatest

*ಜಂಬುನಾಥೇಶ್ವರ ರಥೋತ್ಸವದ ವೇಳೆ ಚಕ್ರದಡಿ ಸಿಲುಕಿ ವ್ಯಕ್ತಿ ಸಾವು*

ಪ್ರಗತಿವಾಹಿನಿ ಸುದ್ದಿ: ರಥದ ಚಕ್ರದಡಿ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ‌ಹೊರವಲಯದ ಶ್ರೀ ಜಂಬುನಾಥೇಶ್ವರ ಜಾತ್ರಾ ಮಹೋತ್ಸವದಲ್ಲಿ ನಡೆದಿದೆ.‌

Home add -Advt

ರಥೋತ್ಸವದ ಚಕ್ರದಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಕೂಡಲೆ ಅಂಬ್ಯುಲೇನ್ಸ್ ಮೂಲಕ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವನ್ನಪ್ಪಿದ್ದಾನೆ.‌

ಸಾವನ್ನಪ್ಪಿದ ವ್ಯಕ್ತಿಯ ಗುರು ಪತ್ತೆ ಸಿಗದ ಹಿನ್ನಲೆ ಆಸ್ಪತ್ರೆಗೆ ಹೊಸಪೇಟೆ ಗ್ರಾಮೀಣ ಪೊಲೀಸರು ದೌಡಾಯಿಸಿ ಮೃತ ವ್ಯಕ್ತಿಯ ಹೆಸರು, ವಿಳಾಸ ಪತ್ತೆ ಹಚ್ಚುತ್ತಿದ್ದಾರೆ.‌

Related Articles

Back to top button