Latest

ಸಿಎಂ ಬಿಎಸ್ ವೈ ನಿವಾಸಕ್ಕೆ ಮುತ್ತಿಗೆ ಯತ್ನ

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ಖಂಡಿಸಿ ಕಾಂಗ್ರೆಸ್ ನ ಎನ್ ಎಸ್ ಯುಐ ಸಂಘಟನೆ ಕಾರ್ಯಕರ್ತರು ಮುಖ್ಯಮಂತ್ರಿ ಬಿ.ಎಸ್ ಯಡಿಯುರಪ್ಪ ನಿವಾಸದ ಮೇಲೆ ಮುತ್ತುಗೆ ಹಾಕಲು ಯತ್ನಿಸಿರುವ ಘಟನೆ ನಡೆದಿದೆ.

ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ ಖಂಡಿಸಿ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಎನ್ ಎಸ್ ಯು ಐ ಕಾರ್ಯಕರ್ಯಕರ್ತರ ಜೊತೆಗೂಡಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಈ ವೇಳೆ ವಿನೋಭಾ ನಗರದಲ್ಲಿರುವ ಸಿಎಂ ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.

Home add -Advt

ತಕ್ಷಣ ಪೊಲೀಸರು, ಸಿಎಂ ನಿವಾಸಕ್ಕೆ ಸಂಪರ್ಕ ಕಲ್ಪಿಸುವ ನಾಲ್ಕು ರಸ್ತೆಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ಪ್ರತಿಭಟನಾ ನಿರತರನ್ನು ತಡೆದಿದ್ದಾರೆ. ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನಚಕಮಕಿ ನಡೆದಿದ್ದು, ಈ ವೇಳೆ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Related Articles

Back to top button