Health

*ಕೋವಿಡ್ ಪ್ರಕರಣ ಹೆಚ್ಚಳ: ರಾಜ್ಯ ಸರ್ಕಾರದಿಂದ ಗೈಡ್ ಲೈನ್ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ ಮತ್ತೆ ಸದ್ದಿಲ್ಲದೇ ಕೊರೊನಾ ವೈರಸ್ ಹೆಚ್ಚುತ್ತಿದ್ದು, ದೆಹಲಿ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸರ್ಕಾರಗಳು ಮಾರ್ಗಸೂಚಿ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿಯೂ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ಒಂದೇ ದಿನದಲ್ಲಿ 19 ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ತು 35 ಸಕ್ರಿಯ ಪ್ರಕರಣಗಳಿದ್ದು, ಅವುಗಳಲ್ಲಿ ಬೆಂಗಳೂರಿನಲ್ಲಿಯೇ 32 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಾರ್ವಜನಿಕರು ಅನುಸರಿಸಬೇಕಾದ ಮುಂಜಾಗೃತಾ ಕ್ರಮ, ಮಾರ್ಗಸೂಚಿ ಬಿಡುಗಡೆ ಮಾಡಿದೆ.

Home add -Advt

ನೆಗಡಿ, ಕೆಮ್ಮು, ಜ್ವರದಂತಹ ಆರೋಗ್ಯ ಸಮಸ್ಯೆ ಕಂಡುಬಂದಲ್ಲಿ ನಿರ್ಲಕ್ಷ್ಯ ಬೇಡ. ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ.

ಮಕ್ಕಳು, ವೃದ್ಧರು, ಆರೋಗ್ಯ ಸಮಸ್ಯೆಯಿಂದ ಬಳಲುವವರು ಮಾಸ್ಕ್ ಧರಿಸುವುದು ಹಾಗೂ ಕೈಗಳ ನೈರ್ಮಲ್ಯ ಕಾಪಾಡುವುದು ಮುಖ್ಯ

ಗರ್ಭಿಣಿಯರು, ಮಕ್ಕಳು, ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ರೋಗನಿರೋಧಕ ಶಕ್ತಿ ಕಡಿಮೆ ಇರುವವರು ಜನದಟ್ಟಣೆ ಪ್ರದೇಶಗಳಲ್ಲಿ ಫೇಸ್ ಮಾಸ್ಕ್ ಧರಿಸಿ ಓಡಾಡುವಂತೆ ಸೂಚಿಸಲಾಗಿದೆ.

ಸಾರ್ವಜನಿಕರು ನಿಯಮಿತವಾಗಿ ಹ್ಯಾಂಡ್ ಸ್ಯಾನಟೈಸರ್ ಬಳಸಬೇಕು.

ಉಸಿರಾಟದ ಸಮಸ್ಯೆಯಿರುವವರು ಸಕಾಲದಲ್ಲಿ ಚಿಕಿತ್ಸೆ ಪಡೆಯಬೇಕು. ಸಂಭಾವ್ಯ ಅಪಾಯ ತಡೆಗಟ್ಟಲು ಕೋವಿಡ್-19 ಪರೀಕ್ಷೆಗಳನ್ನು ತಕ್ಷಣವೇ ಮಾಡಿಸಿಕೊಳ್ಳಬೇಕು.

Related Articles

Back to top button