Kannada NewsKarnataka NewsLatest
*ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿ ಬಿದ್ದ ಸಾರಿಗೆ ಬಸ್*

ಪ್ರಗತಿವಾಹಿನಿ ಸುದ್ದಿ; ಶಿರಸಿ: ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಗದ್ದೆಗೆ ಬಿದ್ದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ಮುಖ್ಯ ರಸ್ತೆಯ ಹನುಮಂತಿ ಬಳಿ ನಡೆದಿದೆ.
ಇಂದು ನಸುಕಿನ ಜಾವ ಈ ಘಟನೆ ನಡೆದಿದೆ. ಮಂಗಳೂರಿನಿಂದ ಕುಷ್ಟಗಿಗೆ ಹೋಗುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಶಿರಸಿಯ ಹನುಮಂತಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗದ್ದೆಗೆ ಪಲ್ಟಿಯಾಗಿ ಬಿದ್ದಿದೆ.
ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಬಸ್ ಚಾಲಕನಿಗೆ ಗಂಭೀರವಾಗಿ ಗಾಯಗಳಾಗಿವೆ. ಗಾಯಗೊಂಡ ಪ್ರಯಾಣಿಕರನ್ನು ಶಿರಸಿ ಪಂಡಿತ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




