Belagavi NewsBelgaum NewsKarnataka News
*ಬೆಳಗಾವಿಗೂ ಕಾಲಿಟ್ಟ ಕೊರೊನಾ ವೈರಸ್: ಗರ್ಭಿಣಿಗೆ ಸೋಂಕು ದೃಢ*

ಪ್ರಗತಿವಾಹಿನಿ ಸುದ್ದಿ: ಕೊರೊನಾ ಮಹಾಮಾರಿ ಮತ್ತೆ ವ್ಯಾಪಕವಾಗಿ ಹರಡಲಾರಂಭಿಸಿದೆ. ಬೆಂಗಳೂರಿನಲ್ಲಿ 9 ತಿಂಗಳ ಮಗುವಿನಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದ ಘಟನೆ ಬೆನ್ನಲ್ಲೆ ಇದೀಗ ಬೆಳಗಾವಿಗೂ ಕೋವಿಡ್ ಕಾಲಿಟ್ಟಿದೆ.
ಬೆಳಗಾವಿಯಲ್ಲಿ ಗರ್ಭಿಣಿಯೊಬ್ಬರಿಗೆ ಕೊರೊನಾ ಸೋಂಕು ದೃಢ ಪಟ್ಟಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 27 ವರ್ಷದ ಗರ್ಭಿಣಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಗರ್ಭಿಣಿ ಕಳೆದ ತಿಂಗಳು ಮಹಾರಾಷ್ಟ್ರದ ಪುಣೆಗೆ ಹೋಗಿದ್ದರು. ಈಗಾಗಲೇ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಿದ್ದು 50 ಪ್ರಕರಣಗಳು ಪತ್ತೆಯಾಗಿವೆ. ಮೂವರು ಕೊರಿನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಇದೀಗ ಗಡಿ ಜಿಲ್ಲೆ ಬೆಳಗಾವಿಗೂ ಕೊರೊನಾ ವಕ್ಕರಿಸಿದ್ದು, ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಇನ್ನು ಕರ್ನಾಟಕದಲ್ಲಿ ನಿನ್ನೆ ಒಂದೇ ದಿನ 19 ಕೇಸ್ ಗಳು ಪತ್ತೆಯಾಗಿದ್ದು, 35 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದುಬಂದಿದೆ.




