Belagavi NewsBelgaum NewsKannada NewsKarnataka NewsNationalPolitics

*ಚಿಕ್ಕೋಡಿ-ನಿಪ್ಪಾಣಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಯುವಕರು ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚಿಕ್ಕೋಡಿ-ನಿಪ್ಪಾಣಿ ರಾಜ್ಯ ಹೆದ್ದಾರಿಯ ಚಿಂಚಣಿ ಟೋಲ್ ನಾಕಾ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಟ್ರಕ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.​ಅಪಘಾತದಲ್ಲಿ ಮೃತಪಟ್ಟ ಯುವಕರನ್ನು ಚಿಕ್ಕೋಡಿಯ ಓತಾರಿ ಗಲ್ಲಿಯ ನಿವಾಸಿಗಳಾದ ಸಿದ್ದು ಕುರಳೆ ಮತ್ತು ಸ್ವರೂಪ್ ಮಾಳವದೆ ಎಂದು ಗುರುತಿಸಲಾಗಿದೆ. 

ಮೃತ ಯುವಕರು ತಮ್ಮ ಕೆಲಸ ಮುಗಿಸಿಕೊಂಡು ಬೈಕ್ ಮೇಲೆ ಮನೆಗೆ ಮರಳುತ್ತಿದ್ದರು. ಚಿಂಚಣಿ ಟೋಲ್ ಗೇಟ್ ತಲುಪುತ್ತಿದ್ದಂತೆ, ಇವರ ಬೈಕ್ ಚಿಕೋಡಿ ಕಡೆಗೆ ಸಾಗುತ್ತಿದ್ದ ಟ್ರಕ್‌ಗೆ ಹಿಂಬದಿಯಿಂದ ಜೋರಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

​ಡಿಕ್ಕಿಯ ರಭಸಕ್ಕೆ ಯುವಕರಿಬ್ಬರು ರಸ್ತೆಗೆ ಬಿದ್ದಿದ್ದು, ತಲೆಗೆ ಗಂಭೀರವಾದ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Home add -Advt

Related Articles

Back to top button