Latest

*ಇಂದಿನಿಂದ ಹೆಚ್ಚಲಿದೆ ವರುಣಾರ್ಭಟ; ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಂದು ವಾರದಿಂದ ಮಳೆಯಾಗುತ್ತಿದ್ದು, ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದೆ. ಕೃಷಿ ಚಟುವಟಿಕೆಗಳು ಬರದಿಂದ ಸಾಗಿವೆ.

Home add -Advt

ರಾಜ್ಯದಲ್ಲಿ ಜೂನ್ -12ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಡಿನ ಹಲವೆಡೆ ಭಾರಿ ಮಳೆಯಾಗಲಿದೆ.

ಇಂದಿನಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಈ ಹಿನ್ನೆಲೆಅಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಗದಗ, ಕೊಪ್ಪಳ, ಧಾರವಾಡ, ರಾಯಚೂರು, ವಿಜಯಪುರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಶಿವಮೊಗ್ಗ, ಹಾಸನ, ತುಮಕೂರು, ಮೈಸೂರು, ರಾಮನಗರ, ಕೊಡಗು, ಕೋಲಾರ, ಮಂಡ್ಯ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಾಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

Related Articles

Back to top button