Latest

ಪತ್ನಿ ಹಾಗೂ 3 ವರ್ಷದ ಮಗನನ್ನು ಬರ್ಬರವಾಗಿ ಹತ್ಯೆಗೈದ ವ್ಯಕ್ತಿ

ಪ್ರಗತಿವಾಹಿನಿ ಸುದ್ದಿ; ತುಮಕೂರು: ಪತ್ನಿ ಹಾಗೂ ಮೂರು ವರ್ಷದ ಪುಟ್ಟ ಮಗನನ್ನು ಪತಿ ಮಹಾಶಯನೊಬ್ಬ ಬರ್ಬರವಾಗಿ ಹತ್ಯೆಗೈದಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕೊಂಡ್ಲಿ ಬಳಿ ನಡೆದಿದೆ.

26 ವರ್ಷದ ಕವಿತಾ ಹಾಗೂ ಮೂರು ವರ್ಷದ ಮಗ ಜೀವನ್ ಇಬ್ಬರನ್ನು ಕವಿತಾ ಪತಿ ಸ್ವಾಮಿ ಎಂಬಾತ ಹಾರೆಯಿಂದ ಹೊಡೆದು ಕೊಲೆಗೈದಿದ್ದಾನೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ.

Home add -Advt

ಇಂದು ಬೆಳಿಗ್ಗೆ ಈ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಆರೋಪಿಯನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಚೇಳೂರು ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

4 ವರ್ಷದ ಬಾಲಕಿ ಮೇಲೆ ಪ್ರಾಂಶುಪಾಲರ ಚಾಲಕನಿಂದ ಅತ್ಯಾಚಾರ

https://pragati.taskdun.com/latest/hydrabad4yers-girlrapeschool-principal-driver/

Related Articles

Back to top button