CrimeKarnataka NewsLatest

*ಲೇಡೀಸ್ ಪಿಜಿಗೆ ಬೆತ್ತಲಾಗಿ ನುಗ್ಗಿದ ವ್ಯಕ್ತಿ*: *ಸಿಸಿ ಕ್ಯಾಮರಾದಲ್ಲಿ ಅಸಭ್ಯ ವರ್ತನೆ ಸೆರೆ*

ಪ್ರಗತಿವಾಹಿನಿ ಸುದ್ದಿ: ಲೇಡೀಸ್ ಪಿಜಿಗೆ ವ್ಯಕ್ತಿಯೊಬ್ಬ ಬೆತ್ತಲೆಯಾಗಿ ನುಗ್ಗಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಈ ವ್ಯಕ್ತಿಯ ಅಸಭ್ಯ ವರ್ತನೆಯ ದೃಶ್ಯಗಳು ಪಿಜಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಉಪನಗರ ಪೊಲೀಸರು ವ್ಯಕ್ತಿಯ ಪತ್ತೆಗೆ ಮುಂದಾಗಿದ್ದಾರೆ. ಧಾರವಾಡದಲ್ಲಿ ಈ ಘಟನೆ ನಡೆದಿದೆ.

ಧಾರವಾಡದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡಿದೆ. ವ್ಯಕ್ತಿಯೊಬ್ಬ ಲೇಡೀಸ್ ಪಿಜಿಗೆ ಬೆತ್ತಲೆಯಾಗಿ ನುಗ್ಗಿ ಅಸಭ್ಯವಾಗಿ ವರ್ತಿಸಿದ್ದಾನೆ. ಈತನ ಅಸಭ್ಯ ವರ್ತನೆ ಪಿಜಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು,

ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪತ್ತೆಹಚ್ಚಲು ಧಾರವಾಡದ ಉಪನಗರ ಪೊಲೀಸರು ಮುಂದಾಗಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಮಹಿಳೆಯರ ವಸತಿ ನಿಲಯಗಳ ಬಳಿ ಇಂತಹ ಅಸಭ್ಯ ವರ್ತನೆಗಳು ಆತಂಕಕ್ಕೆ ಕಾರಣವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related Articles

Back to top button