Latest

ರಾಜಧಾನಿಯಲ್ಲಿ ಕೊರೊನಾ ಸೋಂಕಿಗೆ ಮತ್ತಿಬ್ಬರು ಬಲಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿನಕ್ಕೂ ಹೆಚ್ಚುತ್ತಿದ್ದು, ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಇಂದು ಕೂಡ ಸೋಂಕಿಗೆ ಮತ್ತಿಬ್ಬರು ಬಲಿಯಾಗಿದ್ದಾರೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಕೊರೊನಾ ರೋಗಿಗಳು ಸಾವನ್ನಪ್ಪಿದ್ದಾರೆ. 61 ವರ್ಷದ ಮಹಿಳೆ ಮತ್ತು 57 ವರ್ಷದ ಪುರುಷ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆ ಆಗಿದೆ.

Home add -Advt

ಒಬ್ಬ ರೋಗಿಯನ್ನು ರಾಜೀವ್ ಗಾಂಧಿ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಕಳುಹಿಸಲಾಗಿತ್ತು. ಮತ್ತೊಬ್ಬ ಸೆಂಟ್ ಮಾರ್ಥಾಸ್ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್ ಆಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಕಳೆದ ಎರಡು ದಿನದಲ್ಲಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ 9 ಜನ ಬಲಿಯಾಗಿದ್ದಾರೆ.

Related Articles

Back to top button