Belagavi NewsBelgaum NewsKannada NewsKarnataka NewsNational

*ಇಂದಿನಿಂದ ಜು. 5ರ ವರೆಗೆ ಭಾರಿ ಮಳೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ:  ರಾಜ್ಯದಲ್ಲಿ ಜೂನ್ 30 ರಿಂದ ಜುಲೈ 5 ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜೂನ್ 30 ರಂದು ಕರಾವಳಿ ಜಿಲ್ಲೆಗಳಿಗೆ ಈಗಾಗಲೇ ಹವಾಮಾನ ಇಲಾಖೆಯು ‘ಆರೆಂಜ್ ಅಲರ್ಟ್’ ಘೋಷಿಸಿದೆ. ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಶೃಂಗೇರಿ, ತೀರ್ಥಹಳ್ಳಿ, ಹೊಸನಗರ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೋಮವಾರ ಮಧ್ಯಾಹ್ನದ ನಂತರ ಆರಂಭವಾದ ಮಳೆಯು ರಾತ್ರಿಯವರೆಗೂ ಜೋರಾಗಿ ಸುರಿದಿದೆ. ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಮರವೊಂದು ರಸ್ತೆಗೆ ಉರುಳಿ ಬಿದ್ದು ಸುಮಾರು ಒಂದು ಗಂಟೆ ಕಾಲ ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿತ್ತು.

Home add -Advt

ಜುಲೈ 1 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ್, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಹಾಸನ, ಕೊಡಗು, ತುಮಕೂರಿನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ನಗರದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದ್ದು ಕೆಲವು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲಿ ಬಲವಾದ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Back to top button