Karnataka News

*ಹಲವು ಜಿಲ್ಲೆಗಳಲ್ಲಿ ಮಳೆಯ ಜೊತೆ ಮಂಜು ಇರಲಿದೆ: ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಲೂ ಕೂಡ ಮಳೆಯಾಗುತ್ತಿದೆ. ಈ ನಡುವೆ ಮಂಜು ಇರಲಿದೆ ಎಂದು ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.

ಫೆಂಗಲ್ ಚಂಡಮಾರುತದ ಹೊಡೆತಕ್ಕೆ ತಮಿಳುನಾಡು, ಕೇರಳ ಮಾತ್ರವಲ್ಲ ಕರ್ನಾಟಕದ ಕೆಲವು ಜಿಲ್ಲೆಗಳು ತತ್ತರಿಸಿದ್ದು, ಇದೀಗ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಮತ್ತು ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Home add -Advt

ಧಾರವಾಡ, ಕೊಪ್ಪಳ, ಗದಗ, ಹಾವೇರಿ, ಬೆಳಗಾವಿ, ಕಲಬುರ್ಗಿ ರಾಯಚೂರು, ಬೀದರ್, ಕೊಡಗು, ತುಮಕೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಅಥವಾ ಗುಡುಗು ಸಹಿತ ಮಳೆಯಾಗುವ ಸಾದ್ಯತೆಗಳಿವೆ, ಅಲ್ಲದೇ ಕೆಲವೆಡೆ ಮಂಜು ಇರುವ ಸಾಧ್ಯತೆಗಳಿವೆ.

ಇನ್ನು ನಾಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ತುಮಕೂರು, ಹಾಸನ, ಕೊಡಗು, ಚಿತ್ರದುರ್ಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಕಲಬುರಗಿ, ಬೆಳಗಾವಿ, ರಾಯಚೂರು, ಬೀದರ್, ಧಾರವಾಡ, ಕೊಪ್ಪಳ, ಹಾವೇರಿ, ಗದಗ ಜಿಲ್ಲೆಯಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲ ಭಾಗದಲ್ಲಿ ದಟ್ಟ ಮಂಜು ಆವರಿಸುವ ಸಾಧ್ಯತೆ ಇದೆ.

Related Articles

Back to top button