Karnataka News

*ಮೈಸೂರು ದಸರಾ ಮಹೋತ್ಸವ: ವಿಶ್ವ ವಿಖ್ಯಾತ ಜಂಬೂ ಸವಾರಿಗೆ ಅದ್ದೂರಿ ಚಾಲನೆ*

750 ಕೆ ಜಿ ಚಿನ್ನದ ಅಂಬಾರಿ ಹೊತ್ತು ರಾಜಗಾಂಭೀರ್ಯದಿಂದ ಸಾಗಿದ ಅಭಿಮನ್ಯು

ಪ್ರಗತಿವಾಹಿನಿ ಸುದ್ದಿ: ಮೈಸೂರು ದಸರಾ ಮಹೋತ್ಸವ-2024 ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಜಂಬೂ ಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಡ ಅದಿದೇವತೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

Home add -Advt

ತಾಯಿ ಚಾಮುಂಡಿ ವಿಗ್ರಹಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ಶಿವರಾಜ್ ತಂಗಡಗಿ ಸೇರಿದಂತೆ ಹಲವರು ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.

ತಾಯಿ ಚಾಮುಂಡೇಶ್ವರಿ ವಿರಾಜಮಾನವಾಗಿರುವ 750ಕೆಜಿ ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ ರಾಜಗಾಂಭೀರ್ಯದಿಂದ ಮೆರವಣಿಗೆಯಲ್ಲಿ ಸಾಗಿದ್ದು, ಅಭಿಮನ್ಯು ಆನೆಗೆ ಕುಮ್ಕಿ ಆನೆಗಳು ಸಾಥ್ ನೀಡಿವೆ.

ಜಂಬೂಸವಾರಿ ಮೆರವಣಿಗೆಯಲ್ಲಿ 51 ಸ್ತಬ್ಧಚಿತ್ರಗಳು, ವಿವಿಧ ಸಾಂಸ್ಕೃತಿಕ ಕಲಾತಂಡಗಳು ಸಾಗಿವೆ. ಅರಮನೆಯಿಂದ ಬನ್ನಿ ಮಂಟಪದವರೆಗೂ ಜಂಬೂ ಸವಾರಿ ಮೆರವಣಿಗೆ ಸಾಗಲಿದೆ. ಬಳಿಕ ಬನ್ನಿಮಂಟಪದಲ್ಲಿ ಸಂಜೆ ಪಂಜಿನ ಕವಾಯಿತು ನಡೆಯಲಿದೆ.


Related Articles

Back to top button