Karnataka NewsLatestPolitics

*ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದಾರೆ. ಕೆಲವೇ ಸಮಯದಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗ, ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರುಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಹೆಚ್ ಎ ಎಲ್ ನಿಂದ ಮೇಖ್ರಿ ಸರ್ಕಲ್ ನ HQTC ಹೆಲಿಪ್ಯಾಡ್ ಗೆ ಆಗಮಿಸಲಿದ್ದು, ಅಲ್ಲಿ ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಬರಮಾಡಿಕೊಳ್ಳಲಿದ್ದಾರೆ.
ಬಳಿಕ ಪ್ರಧಾನಿ ಮೋದಿ ಕೆ.ಎಸ್.ಆರ್. ರೈಲು ನಿಲ್ದಾಣಕ್ಕೆ ತೆರಳಲಿದ್ದಾರೆ.

ಬಳಿಕ ಕೆ.ಎಸ್.ಆರ್ ರೈಲು ನಿಲ್ದಾಣಕ್ಕೆ ತೆರಳಲಿದ್ದು, ಅಲ್ಲಿ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬಳಿಕ ನಮ್ಮ ಮೆಟ್ರೋ ಹಳದಿ ಮಾರ್ಗದ ಮೆಟ್ರೋ ಸಂಚಾರ ಉದ್ಘಾಟಿಸಲಿದ್ದಾರೆ. ಇದೇ ವೇಳೆ ಮೆಟ್ರೋದ 3ನೇ ಹಂತದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button