Belagavi NewsBelgaum NewsKannada NewsKarnataka NewsNationalPolitics

*ಮುಡಾ ಕೇಸ್: ಬೆಳಗಾವಿಯಲ್ಲಿ ಬಿಜೆಪಿ ಪ್ರೊಟೆಸ್ಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಸಿಎಂ ಸಿದ್ದರಾಮಯ್ಯ ರಾಜೀನಾಮೇಗೆ ಆಗ್ರಹಿಸಿ ಬೆಳಗಾವಿಯ ಚೆನ್ನಮ್ಮ ‌ವೃತ್ತದಲ್ಲಿ ಭಾರತೀಯ ಜನತಾ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. 

ಬುಧವಾರ ಭಾರತೀಯ ಜನತಾ ಪಾರ್ಟಿ ಮಾಹಾನಗರ ಘಟಕ ಹಾಗೂ ಗ್ರಾಮಾಂತರ ಘಟಕದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.‌ ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರ ಅರ್ಜಿ ವಜಾ ಆಗಿದೆ.

Home add -Advt

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ‌ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಬಿಜೆಪಿ ಕಾರ್ಯಕರ್ತರು, ಬಡವರ ಸೈಟ್ ನುಂಗಿದ  ಸಿದ್ದರಾಮಯ್ಯ ರಾಜಿನಾಮೇ ಕೊಡಬೇಕು  ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.

ಈ ವೇಳೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಮಾಜಿ ಶಾಸಕ ಸಂಜಯ ಪಾಟೀಲ, ಬಿಜೆಪಿ ಗ್ರಾಮಾಂತರ ಜಿಲ್ಲಾದ್ಯಕ್ಷ, ಸುಭಾಷ ಪಾಟೀಲ್, ಮುರಗೇಂದ್ರಗೌಡ ಪಾಟೀಲ್, ಡಾ. ಸೋನಾಲಿ ಸರ್ನೋಬತ್ ಸೇರಿದಂತೆ ಅನೇಕರು ಇದ್ದರು.

Related Articles

Back to top button