Latest

*ಅಂಜಲಿ ಸಹೋದರಿ ಆತ್ಮಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯಲ್ಲಿ ಹತ್ಯೆಯಾದ ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಮೃತ ಅಂಜಲಿ ಅಂಬಿಗೇರ ಸಹೋದರಿ ಯಶೋಧಾ ಪಿನಾಯಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಆಕೆಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ನಿನ್ನೆ ವಿವಿಧ ಮಠಾಧೀಶರು ಹಾಗೂ ಸಾರ್ವಜನಿಕರು ಹುಬ್ಬಳ್ಳಿ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯಲ್ಲಿ ಅಂಜಲಿ ಸಹೋದರಿ ಯಶೋಧ ಕೂಡ ಭಾಗಿಯಾಗಿದ್ದರು. ಪ್ರತಿಭಟನೆ ವೇಳೆ ಯಶೋಧಾ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ತಕ್ಷಣ ಆಕೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕರೆದೊಯ್ಯಲಾಗಿತ್ತು.

ಬಳಿಕ ಯಶೋಧ ತಡರಾತ್ರಿ ಪಿನಾಯಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಆಕೆಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


Related Articles

Back to top button