Latest

ಸಂಸದ ಹಾಗೂ ಶಾಸಕರಿಗೂ ಕೋವಿಡ್

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಈಗಾಗಲೇ ಮುಖ್ಯಮಂತ್ರಿಯಾದಿಯಾಗಿ ಹಲವು ಸಚಿವರು, ಶಾಸಕರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಕಲಬುರ್ಗಿ ಸಂಸದ ಡಾ. ಉಮೇಶ್ ಜಾಧವ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಅಲ್ಲದೇ ಅವರ ಪುತ್ರ ಚಿಂಚೋಳಿ ಶಾಸಕ ಡಾ. ಅವಿನಾಶ್ ಜಾಧವ್​ ಅವರಿಗೂ ಕೊರೋನಾ ಸೋಂಕು ಪತ್ತೆಯಾಗಿದೆ.

ಈ ಕುರಿತು ಸ್ವತ: ಸಂಸದ ಉಮೇಶ್ ಜಾಧವ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಅಲ್ಲದೇ ತಮ್ಮ ಸಂಪರ್ಕದಲ್ಲಿದ್ದವರು ತಕ್ಷನ ಕೊವಿಡ್ ಟೆಸ್ಟ್ ಗೆ ಒಲಗಾಗುವಂತೆ ಮನವಿ ಮಾಡಿದ್ದಾರೆ.

Home add -Advt

ತಂದೆ ಮತ್ತು ಮಗ ಇಬ್ಬರಿಗೂ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದಷ್ತೇ ಸಂಸದರು ಕಲಬುರ್ಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರು. ಈ ಹಿನ್ನಲೆಯಲ್ಲಿ ಅಧಿಕಾರಿಗಳಿಗೂ ಈಗ ಕೊರೊನಾ ಭೀತಿ ಶುರುವಾಗಿದೆ.

Related Articles

Back to top button