Kannada NewsKarnataka NewsLatest

*ಬೆಂಕಿ ಅವಘಡ: 4.75 ಲಕ್ಷ ಮೌಲ್ಯದ ಮೆಕ್ಕೆ ಜೋಳ ಸುಟ್ಟು ಕರಕಲು*

ಪ್ರಗತಿವಾಹಿನಿ ಸುದ್ದಿ: ಆಕಸ್ಮಿಕ ಬೆಂಕಿ ಅವಘಡಕ್ಕೆ 4.75 ಲಕ್ಷ ಮೌಲ್ಯದ 320 ಕ್ವಿಂಟಲ್ ಮೆಕ್ಕೆ ಜೋಳ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಯರಗನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ವೀರಬಸಪ್ಪ ಅವರಿಗೆ ಸೇರಿದ ಎರಡು ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆ ಜೋಳಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಬೆಳೆ ಸಂಪೂರ್ಣ ಸುಟ್ಟು ಹೋಗಿದೆ.

Home add -Advt

ಇದೇ ವೇಳೆ ಗ್ರಾಮದ ಬಸಪ್ಪ ಅವರ ಎಂಟು ಎಕರೆ ಜಮೀನಿನಲ್ಲಿ ಬೆಳೆದಿದ್ದ 250 ಕ್ವಿಂಟಾಲ್ ಮೆಕ್ಕೆ ಜೋಳ ಕೂಡ ಬೆಂಕಿಯ ಕೆನ್ನಾಲಿಗೆಗೆ ಸುತ್ಟು ಭಸ್ಮವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Related Articles

Back to top button