Belagavi NewsBelgaum NewsKannada NewsKarnataka NewsLatestPolitics

*ಗೋಕಾಕ ಪಾಲ್ಸ್‌ ಗೆ ಸಚಿವ ಸತೀಶ್‌ ಜಾರಕಿಹೊಳಿ ಭೇಟಿ*

ಪ್ರಗತಿವಾಹಿನಿ ಸುದ್ದಿ; ಗೋಕಾಕ: ಗೋಕಾಕ ಪಾಲ್ಸ್‌ ಗೆ ಇಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರವಾಗಿ ಗುರುತಿಸಿಕೊಂಡಿರುವ ಗೋಕಾಕ ಪಾಲ್ಸ್‌ಗೆ ವರ್ಷಕ್ಕೆ 3ರಿಂದ 4 ಲಕ್ಷ ಜನ ಭೇಟಿ ನೀಡುತ್ತಾರೆ. ಪ್ರವಾಸಿಗರ ಸುರಕ್ಷೆತೆಗಾಗಿ ಹಲವು ಕ್ರಮ ಕೈಗೊಳ್ಳುವುದಕ್ಕಾಗಿಯೇ ಸಚಿವ ಸತೀಶ್‌ ಜಾರಕಿಹೊಳಿ ಅವರು ಗೋಕಾಕ ಪಾಲ್ಸ್‌ ಗೆ ಭೇಟಿ ನೀಡಿದ್ದಾಗಿ ತಿಳಿಸಿದ್ದಾರೆ.

Home add -Advt

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಪ್ರಸಿದ್ದ ಗೋಕಾಕ ಜಲಪಾತಕ್ಕೆ ಅಪಾರ ಸಂಖ್ಯೆಯ ಪ್ರಯಾಣಿಕರು ಭೇಟಿ ನೀಡುತ್ತಾರೆ. ಪ್ರವಾಸೋದ್ಯಮ ಇಲಾಖೆ ವತಿಯಿಂದ ಜಲಪಾತದ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಕಾಮಗಾರಿಗಳ ಕುರಿತು ಮಾಹಿತಿ ಪಡೆದಿದ್ದು, ಶೀಘ್ರವೇ ಗೋಕಾಕ ಪಾಲ್ಸ್‌ ನ್ನು ಅಭಿವೃದ್ಧಿ ಪಡಿಸುವುದಾಗಿ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಯುವ ನಾಯಕಿ ಪ್ರಿಯಾಂಕಾ ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಸೇರಿದಂತೆ ಸ್ಥಳೀಯ ಮುಖಂಡರು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Related Articles

Back to top button