Latest

ತಂಬಾಕು ನಿಯಂತ್ರಣ ಕೋಶದಿಂದ ದಾಳಿ: 19 ಪ್ರಕರಣ ದಾಖಲು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಅಥಣಿ ತಾಲೂಕಿನಲ್ಲಿ ಕೋಟ್ಪಾ -೨೦೦೩ ಕಾಯ್ದೆಯಡಿಯಲ್ಲಿ ದಾಳಿ ನಡೆಸಿ ಒಟ್ಟು 19 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಗಿದೆ.

Home add -Advt

ದಾಳಿಯಲ್ಲಿ ಸಾರ್ವಜನಿಕರಿಗೆ ಮತ್ತು ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿ ಮಾಲಿಕರಿಗೆ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳನ್ನು ತಿಳಿಸಿ, ಕೋಟ್ಪಾ-೨೦೦೩ ಕಾಯ್ದೆ ಅಡಿಯಲ್ಲಿ  ಪ್ರಕರಣ ದಾಖಲಿ ಸಲಾಯಿತು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಡಾ.ಶ್ವೇತಾ ಪಾಟೀಲ ಜಿಲ್ಲಾ ಸಲಹೆಗಾರರು, ಕವಿತಾ ರಾಜನ್ನವರ ಜಿಲ್ಲಾ ಸಮಾಜ ಕಾರ್ಯಕರ್ತೆ, ಬಿ. ಎಸ್. ಚವ್ಹಾಣ ಹಿರಿಯ ಆರೋಗ್ಯ ಸಹಾಯಕರು ಹಾಗೂ ಪೊಲೀಸ್ ಸಿಬಂದ್ದಿ್ ದಾಳಿಯಲ್ಲಿ ಇದ್ದರು. 

Related Articles

Back to top button