Karnataka NewsLatestPolitics

*ಸಚಿವ ಸಂಪುಟ ಪುನಾರಚನೆ ಚರ್ಚೆ: ಗರಿಗೆದರಿದ ರಾಜ್ಯ ರಾಜಕೀಯ: ದೆಹಲಿ ಪ್ರವಾಸಕ್ಕೆ ಸಜ್ಜಾದ 20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ಪುನಾರಚನೆ ಚರ್ಚೆ ಆರಂಭವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿದೆ. 20ಕ್ಕೂ ಹೆಚ್ಚು ಕೈ ಶಾಸಕರು ದೆಹಲಿ ಪ್ರವಾಸಕ್ಕೆ ಸಜ್ಜಾಗಿದ್ದಾರೆ.

Home add -Advt

ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಮತ್ತು ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರ ನೇತೃತ್ವದಲ್ಲಿ ಶಾಸಕರು ನಾಳೆ ದೆಹಲಿಗೆ ತೆರಳಲಿದ್ದು, ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕಾಗಿ ಮನವಿ ಮಾಡಲಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳಾಗಿವೆ. ಸಂಪುಟ ಪುನರ್‌ ರಚನೆ ಮಾಡಿ ಹೊಸಬರಿಗೆ ಅವಕಾಶ ನೀಡಬೇಕು. ಈ ಬಗ್ಗೆ ಈ ಹಿಂದೆಯೇ ಭರವಸೆಗಳನ್ನು ನೀಡಲಾಗಿತ್ತು. ಪಕ್ಷಕ್ಕಾಗಿ ನಾವು ನಿರಂತರವಾಗಿ ದುಡಿದಿದ್ದೇವೆ. ಉಳಿದಿರುವ ಎರಡು ವರ್ಷದ ಅವಧಿಗಾದರೂ ನಮಗೆ ಸಚಿವ ಸ್ಥಾನ ನೀಡಬೇಕು ಎಂದು ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ಮನವಿ ಮಾಡಲಿದ್ದಾರೆ ಎನ್ನಲಾಗಿದೆ.

ಒಟ್ಟಾರೆ ಕಾಂಗ್ರೆಸ್ ಶಾಸಕರ ದೆಹಲಿ ಪ್ರವಾಸ ತೀವ್ರ ಕುತೂಹಲ ಮೂಡಿಸಿದೆ.


Related Articles

Back to top button