Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಅಕ್ಟೋಬರ್ 10ರಿಂದ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಡಿನ ಹಲವೆಡೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ಕೋಲಾರ ಜಿಲ್ಲೆಗಳಲ್ಲಿ ಅಕ್ಟೋಬರ್ 10 ರಿಂದ ಮೂರು ದಿನ ಮಳೆಯಾಗಲಿದೆ.

Home add -Advt

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣ ವಿರಲಿದ್ದು, ಸಂಜೆ ವೇಳೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Related Articles

Back to top button