
ಪ್ರಗತಿವಾಹಿನಿ ಸುದ್ದಿ: ಗಣೇಶ ನಚಿಕೇತು ಅವರನ್ನು ಸಾರ್ವಜನಿಕ ಸಂಪರ್ಕ ಮತ್ತು ಸಂವಹನ ಹುದ್ದೆ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ ಎಂದು ಕೆಲ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ.
ಗಣೇಶ್ ನಚಿಕೇತು ಅವರನ್ನು ರಾಜ್ಯ ಮುಖ್ಯಸ್ಥರು – ಸಾರ್ವಜನಿಕ ಸಂಪರ್ಕ ಮತ್ತು ಸಂವಹನ (State Head – PR & Communication) ಹುದ್ದೆಗೆ ನೇಮಕ ಮಾಡಲಾಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿರುವುದು ಕರ್ನಾಟಕ ಸರ್ಕಾರದ ಗಮನಕ್ಕೆ ಬಂದಿದೆ. ಗಣೇಶ್ ನಚಿಕೇತು ಅವರನ್ನು ಸರ್ಕಾರವು ಅಂತಹ ಯಾವುದೇ ಹುದ್ದೆಗೆ ನೇಮಿಸಿಲ್ಲ ಮತ್ತು ಯಾವುದೇ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಜವಾಬ್ದಾರಿ ನೀಡಲಾಗಿಲ್ಲ ಎಂದು ಸ್ಪಷ್ಟ ಪಡಿಸಿದೆ.
ಈ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




